ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಪುತ್ತೂರು, ಆ.03. ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿ ಗ್ರಾಮದ ಇರ್ದೆಎಂಬಲ್ಲಿ ಶುಕ್ರವಾರದಂದು ನಡೆದಿದೆ.







ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಬೆಟ್ಟಂಪಾಡಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ, ಇರ್ದೆ ಜೋಗಿಮೂಲೆ ನಿವಾಸಿ ರಮಣ್(15) ಎಂದು ಗುರುತಿಸಲಾಗಿದೆ. ಈತನು ತನ್ನ ಮನೆಯ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿದ್ದು, ಶುಕ್ರವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top