ಕಡಬ: ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಬೃಹತ್ ಮರ

(ನ್ಯೂಸ್ ಕಡಬ) newskadaba.com ಕಡಬ, ಆ.03. ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಬಿದ್ದು ರಿಕ್ಷಾ ಜಖಂಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಕಡಬ ಸಮೀಪದ ಮುಳಿಮಜಲು ಎಂಬಲ್ಲಿ ನಡೆದಿದೆ.

ಕುಟ್ರುಪ್ಪಾಡಿ ಗ್ರಾಮದ ಮುಳಿಮಜಲು ಸಮೀಪದ ಕೊಳಂಬೆತಡ್ಡ ನಿವಾಸಿ ಜಗನ್ನಾಥ್ ಎಂಬವರು ತನ್ನ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟು ಕಡಬ ಕಡೆಗೆ ತೆರಳುತ್ತಿದ್ದಾಗ ಬೃಹತ್ ಗಾತ್ರದ ಮರವೊಂದು ರಿಕ್ಷಾದ ಮೇಲೆ ಬಿದ್ದು ರಿಕ್ಷಾದ ಮುಂಭಾಗ ಜಖಂಗೊಂಡಿದೆ. ಚಾಲಕ ಜಗನ್ನಾಥ್ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Scroll to Top