ಸಾಮಾಜಿಕ ಜಾಲತಾಣದಲ್ಲಿ ಸಿಎಂ ಕುಮಾರಸ್ವಾಮಿಯವರ ನಿಂದನೆ ► ಬಂಟ್ವಾಳ ಮೂಲದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.04. ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ಯುವಕನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಮೇರಮಜಲು ನಿವಾಸಿ ಪ್ರಶಾಂತ್ ಪೂಜಾರಿ (24) ಎಂದು ಗುರುತಿಸಲಾಗಿದೆ. ಈತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಇನ್‌ಸ್ಟಾಗ್ರಾಮ್ ಮೂಲಕ ಅವಾಚ್ಯವಾಗಿ ನಿಂದಿಸಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಕದ್ರಿ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.

Scroll to Top