ಕೊಕ್ಕಡ: ಕಾರು – ಬಸ್ ಢಿಕ್ಕಿ ► ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.06. ಕಾರು ಮತ್ತು ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ದಾರುಣ ಘಟನೆ ಕೊಕ್ಕಡ ಸಮೀಪದ ಪಾರ್ಪಿಕಲ್ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಧರ್ಮಸ್ಥಳದ ಮುಳಿಕ್ಕಾರು ನಿವಾಸಿ ವೀರಪ್ಪ ಮಲೆಕುಡಿಯರವರ ಪುತ್ರ ದಿನೇಶ್ ಪಿ. ಮತ್ತು ಧರ್ಮಸ್ಥಳದ ಸಂದು ಲೈಟಿಂಗ್ಸ್ ನ ಮಾಲಕ ಸಂದೇಶ್ ಎಂದು ಗುರುತಿಸಲಾಗಿದೆ. ಕೊಕ್ಕಡದ ಸಮೀಪ ಕೌಕ್ರಾಡಿ ಗ್ರಾಮದ ಪಾರ್ಪಿಕಲು ಬಳಿ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಮಾರುತಿ 800 ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಯಿಂದ ಮಾರುತಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ಯುವಕರಾದ ಶರೀಫ್ ಬೋಳದ ಬೈಲು, ಖಲಂದರ್ ಕೊಕ್ಕಡ, ಆರಿಫ್, ನವಾಜ್ , ಶಫ್ವಾನ್, ರಾಜಾ ಟಿಪ್ಪು ಸುಲ್ತಾನ್,ಲತೀಫ್ ಬೋಳದಬೈಲು ಮತ್ತಿತರರು ಹರಸಾಹಸ ಪಟ್ಟು ಕಾರಿನಿಂದ ಹೊರಗೆ ತೆಗೆದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಗಾಯಾಳುಗಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು

 

error: Content is protected !!
Scroll to Top