Newskadaba.comಬೆಳ್ಳಾರೆ : ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಶ್ರಯದಲ್ಲಿ 9 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕ್ರೀಡಾಕೂಟವು ಸೆ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿನಡೆಯಲಿದೆ.
ಬೆಳಗ್ಗೆ 9.00 ಕ್ಕೆ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಮನವಳಿಕೆ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಆನಂತರ ಸಭಾಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ ರೈ ಕನ್ನೆಜಾಲು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ, ಸುದ್ದಿ ವೆಬ್‍ಸೈಟ್ ಮುಖ್ಯಸ್ತದುರ್ಗಾಕುಮಾರ್ ನಾಯರ್‍ಕೆರೆ ಪ್ರತಿಭಾ ಪುರಸ್ಕಾರ ಪ್ರಧಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ್ ಮಹೇಶ್ ಪುಚ್ಚಪ್ಪಾಡಿ, ಮುಕ್ಕೂರು ಹಾ.ಉ.ಸಹಕಾರಿ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ನಿವೃತ್ತ ಕಂದಾಯ ನಿರೀಕ್ಷಕ ದಾಮೋದರ ಗೌಡ ಕಂಡಿಪ್ಪಾಡಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಕವಯತ್ರಿ ಅಶ್ವಿನಿ ರಾಮಚಂದ್ರ ಕೋಡಿಬೈಲು ಪಾಲ್ಗೊಳ್ಳಲಿದ್ದಾರೆ.
ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಗಾಗಿ ನವಜೀತ್ ಜಾಲ್ಪಣೆ, ಅಕ್ಷಯ್ ಬೀರುಸಾಗು, ವೀಕ್ಷಿತಾ ಕೂರೋಡಿ, ರಕ್ಷಿತಾ ಕೊಡಂಗೆ ಅವರಿಗೆ ಸಮ್ಮಾನ ನಡೆಯಲಿದೆ.
ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ವಹಿಸಲಿದ್ದಾರೆ. ಶ್ರೀ ಧ.ಗ್ರಾ.ಯೋ.ಪೆರುವಾಜೆ ಒಕ್ಕೂಟದ ಅಧ್ಯಕ್ಷ ಶೇಷಪ್ಪ ನಾಯ್ಕ ಬಹುಮಾನ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜ್ಯೋತಿ ಯುವಕ ಮಂಡಲ ಮುಕ್ಕೂರು ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ, ಮುಕ್ಕೂರು-ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡ ಅಡ್ಯತಕಂಡ, ಮುಕ್ಕೂರು ಶಾಲಾ ಎಸ್ಡಿಎಂಸಿ ಮಾಜಿ ಅಧ್ಯಕ್ಷ ಕೆ.ಎಚ್ ಮಹಮ್ಮದ್, ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ ಗೌರವಧ್ಯಕ್ಷ ಪೂವಪ್ಪ ನಾಯ್ಕ ಅಡೀಲು ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗದಲ್ಲಿ ಹಗ್ಗಜಗ್ಗಾಟ, ತ್ರೋಬಾಲ್, ಸಂಗೀತ ಕುರ್ಚಿ, ಮಡಿಕೆ ಒಡೆಯುವುದು ಹಗೂ ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ, ವಾಲಿಬಾಲ್, ನಿಧಾನಗತಿ ಬೈಕ್ ರೇಸ್, ಮಡಿಕೆ ಒಡೆಯುವುದು ಸ್ಪರ್ಧೆ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಅವಕಾಶ ಇದ್ದು, ಸ್ಥಳದಲ್ಲಿಯೇ ತಂಡಗಳನ್ನು ಆಯ್ಕೆ ಮಾಡಲಾಗುವುದು ಸಮಿತಿ ಪ್ರಕಟನೆ ತಿಳಿಸಿದೆ.