ಕಲ್ಲಾಜೆ: 407 ಟೆಂಪೋ ಪಲ್ಟಿ ► ಇಬ್ಬರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.09. ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ಗುರುವಾರದಂದು ನಡೆದಿದೆ.

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ಕಾಂಕ್ರೀಟ್ ಮಿಲ್ಲರ್ ಸಾಗಿಸುತ್ತಿದ್ದ 407 ಟೆಂಪೋ ಕಲ್ಲಾಜೆ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ಟೆಂಪೋದ ಒಳಗಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group