ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 11ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶಿಸಿದ್ದಾರೆ.

ಮಳೆಯ ಅಬ್ಬರ ಜೋರಾಗಿದ್ದು, ನದಿ ತೊರೆಗಳು ತುಂಬಿ ತುಳುಕುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

error: Content is protected !!
Scroll to Top