ಇಂದು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಇಂದು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಆ.13 ರಂದು ಮಧ್ಯಾಹ್ನ 1:30ಕ್ಕೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಿಂದ ಹೊರಟು ರಸ್ತೆಯ ಮೂಲಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಸಂಜೆ 4:30ಕ್ಕೆ ಮುಖ್ಯಮಂತ್ರಿ ಆಗಮಿಸಲಿದ್ದಾರೆ. ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 6 ಗಂಟೆಗೆ ಧರ್ಮಸ್ಥಳದಿಂದ ಹೊರಟು ರಾತ್ರಿ 7 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಆ.14 ರಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಬೆಳಗ್ಗೆ 9:30 ಕ್ಕೆ ಕುಕ್ಕೆಯಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 2:30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Also Read  ಸರ್ಕಾರಕ್ಕೆ ನೂರು ದಿನಗಳ ಸಂಭ್ರಮ- ದೇಶಕ್ಕೆ ಮಾದರಿ ಈ ಪಂಚ ಗ್ಯಾರಂಟಿ

error: Content is protected !!
Scroll to Top