(ನ್ಯೂಸ್ ಕಡಬ) newskadaba.com ಮಂಗಳೂರು, ಆ.13. ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 14ರಂದು ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶಿಸಿದ್ದಾರೆ.
ಮಳೆಯ ಅಬ್ಬರ ಜೋರಾಗಿದ್ದು, ನದಿ ತೊರೆಗಳು ತುಂಬಿ ತುಳುಕುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.