(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.16. ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರದಂದು ನಿಧನರಾದರು.

1924ರ ಡಿಸೆಂಬರ್ 25 ರಂದು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಜನಿಸಿದ್ದ ವಾಜಪೇಯಿ
ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 11ರಂದು ಅವರನ್ನು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.










