ಬೆಳ್ಳಾರೆ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.19. ವಿದ್ಯುತ್ ಆಘಾತಕ್ಕೊಳಗಾಗಿ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕೂಡನಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕೂಡನಕಟ್ಟೆ ನಿವಾಸಿ ಪಕೀರ ಎಂಬವರ ಪುತ್ರ ರವಿ ಎಂದು ಗುರುತಿಸಲಾಗಿದೆ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಭಾನುವಾರದಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯವರ ಜಾಗದಲ್ಲಿ ಮರದ ಗೆಲ್ಲು ಕಡಿಯುತ್ತಿದ್ದಾಗ ಗೆಲ್ಲು ಆಕಸ್ಮಿಕವಾಗಿ ವಿದ್ಯುತ್ ಲೈನಿಗೆ ಬಿದ್ದು ಗೆಲ್ಲಿನ ಮುಖಾಂತರ ವಿದ್ಯುತ್ ಪ್ರವಹಿಸಿ ಮೃತಪಟ್ಟನೆನ್ನಲಾಗಿದೆ. ಮೃತನು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾನೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top