ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ► ದೇಣಿಗೆ ನೀಡುವಾಗ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.21. ಕೊಡಗಿನ ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ನಡೆಯುತ್ತಿದ್ದು, ಈ ಬಗ್ಗೆ ಜಿಲ್ಲೆಯ ವಿವಿಧೆಡೆ ನಕಲಿ ಅಕೌಂಟ್‌ಗಳ ಬಗ್ಗೆ ದೂರು ದಾಖಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ವಿವಿಧ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳು ದೇಣಿಗೆ ಸಂಗ್ರಹದಲ್ಲಿ ತೊಡಗಿದ್ದು, ಸಾರ್ವಜನಿಕರು ಯಾವುದೇ ಖಾಸಗಿ ವ್ಯಕ್ತಿಗಳಿಗೆ ನಗದು ರೂಪದಲ್ಲಿ ದೇಣಿಗೆ ನೀಡಬೇಡಿ ಎಂದಿರುವ ಅವರು ಹಣ ನೀಡುವುದಿದ್ದರೆ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಣ ವರ್ಗಾಯಿಸುವಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

Also Read  ಸುಳ್ಯ: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಸಭೆ

error: Content is protected !!
Scroll to Top