ಕಳೆದೆರಡು ದಿನಗಳಿಂದ ಸುರಿಯುತ್ತಿರು ಭಾರೀ ಮಳೆ ► ಸುಬ್ರಹ್ಮಣ್ಯ ಕುಮಾರಧಾರಾ ಹಳೆ ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.19. ಕರಾವಳಿ ಜಿಲ್ಲೆಯಾದ್ಯಂತ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ದಕ್ಷಿಣಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ಕುಮಾರಧಾರಾ ಹಳೆ ಸೇತುವೆಯು ಮಳೆ ನೀರಿನಿಂದಾಗಿ ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರಾ ಸ್ನಾನಘಟ್ಟವೂ ಜಲಾವೃತವಾಗಿದೆ. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜೀವನದಿಗಳಾದ ನೇತ್ರವಾತಿ ಹಾಗೂ ಕುಮಾರಧಾರಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಾಗಿದ್ದು, ಮಳೆ ಹೀಗೇ ಮುಂದುವರಿದಲ್ಲಿ ನದಿ ಪಾತ್ರಗಳಲ್ಲಿ ನೆರೆಯ ಪರಿಸ್ಥಿತಿಯೂ ನಿರ್ಮಾಣವಾಗುವ ಸಾಧ್ಯತೆಯಿದೆ.

Also Read  ಕುಕ್ಕೆಗೆ ಆಗಮಿಸಿದ ಶಿಕ್ಷಣ ಸಚಿವರು

error: Content is protected !!
Scroll to Top