ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ► ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಆ.22. ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಆರೋಪಿಯನ್ನು ಡಿಸಿಐಬಿ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬೀಟಿಕೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಮಹಮ್ಮದ್ ರಫೀಕ್(33) ಎಂದು ಗುರುತಿಸಲಾಗಿದೆ. ಆರೋಪಿಯು ಧರ್ಮಸ್ಥಳ ಠಾಣಾ ವ್ಯಾಪ್ತಿಯ ಚಾರ್ಮಾಡಿ ಎಂಬಲ್ಲಿ ಮೇ 29 ರಂದು ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ 108/18 u/s341,504,506,326 with 75 JB Act & 11,12 ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯು ತಲೆಮರೆಸಿಕೊಂಡಿದ್ದನು. ಮಂಗಳವಾರದಂದು ಡಿಸಿಐಬಿ ಇನ್ಸ್‌ಪೆಕ್ಟರ್ ಸುನೀಲ್ ವೈ ನಾಯಕ್ ಅವರ ನಿರ್ದೇಶನದಂತೆ ಉದಯ ಗೌಡ, ಪ್ರವೀಣ್ ರೈ ಅವರು ಬೆಳ್ಳಾರೆಯ ಮಾಸ್ತಿಕಟ್ಟೆ ಬಳಿ ಆರೋಪಿಯನ್ನು ಬಂಧಿಸಿದ್ದು, ಮುಂದಿನ ತನಿಖೆ ಬಗ್ಗೆ ಧರ್ಮಸ್ಥಳ ಠಾಣೆಗೆ ಹಸ್ತಾಂತರಿಸಲಾಗಿದೆ.

Also Read  ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ ► ನೂತನ ಎಸ್ಪಿಯಾಗಿ ಎನ್ ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇಗೌಡ ನೇಮಕ

error: Content is protected !!
Scroll to Top