ರಾಮಕುಂಜ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.23. ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಮಾರಂಗ ಎಂಬಲ್ಲಿ ಮಂಗಳವಾರದಂದು ನಡೆದಿದೆ.

ನಾಪತ್ತೆಯಾಗಿರುವ ವ್ಯಕ್ತಿಯನ್ನು ರಾಮಕುಂಜ ಗ್ರಾಮದ ಮಾರಂಗ ನಿವಾಸಿ ಪದ್ಮನಾಭ ಶೆಟ್ಟಿ (58) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ಸಂಜೆ ಮನೆಯಿಂದ ಹೊರ ಹೋದವರು ಹಿಂತಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಅಕ್ಕಪಕ್ಕದಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದೆ ಇದ್ದುದರಿಂದ ಅವರ ಪತ್ನಿ ನೀಡಿರುವ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top