ನಾಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬರುವ ಸಾಧ್ಯತೆ ► ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಆ.25 ಶನಿವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆ.28 ರವರೆಗೆ ಭಾರೀ ಮಳೆಯಾಗಲಿದ್ದು, ಬೆಳಗಾವಿ, ಬೀದರ್‌, ಗುಲ್ಬರ್ಗಾ, ಸೇರಿದಂತೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಈಗಾಗಲೇ ಸುರಿದಿರುವ ಮಳೆಯಿಂದಾಗಿ ಬೃಹತ್ ಪ್ರಮಾಣದಲ್ಲಿ ಹಾನಿಯಾಗಿರುವುದರಿಂದ ಈ ಬಾರಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹವಾಮಾನ ಇಲಾಖೆ ಸೂಚಿಸಿದೆ.

Also Read  ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

error: Content is protected !!
Scroll to Top