ಸುಬ್ರಹ್ಮಣ್ಯ: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.25. ಮಾನಸಿಕ ಖಿನ್ನತೆಗೊಳಗಾದ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ನಿಂತಿಕಲ್ ಸಮೀಪ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿನಿ, ನಿಂತಿಕಲ್ಲು ಬಳಿಯ ಹೇಮಳ ನಿವಾಸಿ ಗಣೇಶ್ ಎಂಬವರ ಪುತ್ರಿ ಅನಿತಾ ಎಂದು ಗುರುತಿಸಲಾಗಿದೆ. ಮೂರ್ಛೆ ರೋಗದಿಂದ ಬಳಲುತ್ತಿದ್ದ ಈಕೆ ಶುಕ್ರವಾರದಂದು ಹಾಸ್ಟೆಲ್ ನಿಂದ ಮನೆಗೆ ಆಗಮಿಸಿದ್ದು, ಇಂದು ಬೆಳಿಗ್ಗೆ ಯಾರೂ ಇಲ್ಲದಿದ್ದ ಸಮಯದಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

Scroll to Top