ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ  – News Kadaba

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ 

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.01. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಆನ್ ಲೈನ್ ಮೂಲಕ www.ssp.karnataka.gov.in ಅರ್ಜಿ ಸಲ್ಲಿಸಬಹುದಾಗಿದೆ. ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹವಿರುತ್ತಾರೆ.

ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ದರಗಳು: 1 ರಿಂದ 10 ತರಗತಿವರೆಗೆ ರೂ. 1500/-, ರಾಜ್ಯ ಪುರಸ್ಕೃತ ವಿದ್ಯಾರ್ಥಿವೇತನ ದರಗಳು: 1 ರಿಂದ 5 ನೇ ತರಗತಿವರೆಗೆ ರೂ. 750/-, 6 ರಿಂದ 8ನೇ ತರಗತಿವರೆಗೆ ರೂ. 900/-, 9 ರಿಂದ 10ನೇ ತರಗತಿವರೆಗೆ ರೂ. 1,000/-
ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ/ದಾಖಲೆ: ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್-ಐಡಿ (SATS-ID), (ಸ್ಯಾಟ್ಸ್-ಐಡಿ ತಿಳಿಯಲು ವೆಬ್ ವಿಳಾಸ: http://sts.karnataka.gov.in, ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪೋಷಕರ ಆಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ, ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ, ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ (ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು) ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ (ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು), ಆಧಾರ್ ಸಂಖ್ಯೆ ಇಲ್ಲದಿದ್ದಲ್ಲಿ, ಆಧಾರ್ ನೋಂದಣಿ ಮಾಡಿಸಿದ ಇ.ಐ.ಡಿ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ. ಸಂಖ್ಯೆ, ಬ್ಯಾಂಕಿನ ವಿಳಾಸ, ಪೋಷಕರ ಆಧಾರ್ ನಂಬರ್‍ಗೆ ಲಿಂಕ್ ಮಾಡಿರುವ ಮೊಬೈಲ್ ನಂ ಹಾಗೂ ಭೌತಿಕ ಅನುಮತಿ ಪತ್ರ.
ಕುಟುಂಬದ ವಾರ್ಷಿಕ ಆದಾಯ ಮಿತಿ:
  • ಕೇಂದ್ರ ಪುರಸ್ಕತ ವಿದ್ಯಾರ್ಥಿ ವೇತನ ರೂ. 2.50 ಲಕ್ಷ / ವಾರ್ಷಿಕ ಎಲ್ಲಾ ಪ್ರವರ್ಗಗಳಿಗೆ.
  • ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ರೂ. 1 ಲಕ್ಷ /ವಾರ್ಷಿಕ ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ಮಾತ್ರ
  • ರೂ. 44,500/- ವಾರ್ಷಿಕ ಪ್ರವರ್ಗ-2ಎ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳಿಗೆ.
ಫಲಾನುಭವಿಯ ಜಾತಿ: ರಾಜ್ಯ ಸರ್ಕಾರವು ಅಧಿಸೂಚಿಸಿರುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಹಾಗೂ ಕೇಂದ್ರ ಸರ್ಕಾರವು ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳು (ಪ್ರವರ್ಗ-1, 2ಎ, 2ಬಿ ಮತ್ತು 3ಬಿ ಗಳಲ್ಲಿ ಬರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ). ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ/ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ/www.backwardclasses.kar.nic.in  ಸಂಪರ್ಕಿಸಲು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
Scroll to Top