ಬೆಳ್ತಂಗಡಿ: ಸ್ನಾನಕ್ಕೆಂದು ನದಿಗಿಳಿದ ಯುವಕ ನೀರುಪಾಲು



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.02. ಸ್ನಾನಕ್ಕೆಂದು ತನ್ನ ಗೆಳೆಯರ ಜೊತೆ ನದಿಗಿಳಿದಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರದಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.







ಮೃತ‌ ಯುವಕನನ್ನು ಕಳಿಯ ಗ್ರಾಮದ ಹರ್ಮಾಡಿ ನಿವಾಸಿ ಕೇಶವ ಪೂಜಾರಿ ಎಂಬವರ ಪುತ್ರ ಹರಿಪ್ರಸಾದ್ (18) ಎಂದು ಗುರುತಿಸಲಾಗಿದೆ. ಈತ ಭಾನುವಾರದಂದು ತನ್ನ ಗೆಳೆಯರೊಂದಿಗೆ ಗೇರುಕಟ್ಟೆ ಎರುಕಡಪು ಎಂಬಲ್ಲಿ ಸ್ನಾನಕ್ಕೆಂದು ನದಿಗೆ ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದು, ಸ್ಥಳೀಯರ ನೆರವಿನೊಂದಿಗೆ ಕೂಡಲೇ ಆತನನ್ನು ನೀರಿನಿಂದ ಮೇಲಕ್ಕೆತ್ತಿದರಾದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top