ಸುಬ್ರಹ್ಮಣ್ಯ: ಎಂಟನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ► ಗರ್ಭಿಣಿಯಾದ ಬಾಲಕಿ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.04. ಎಂಟನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಸುಮಾರು ಐದು ತಿಂಗಳ ಹಿಂದೆ ಸುಬ್ರಹ್ಮಣ್ಯ ನಿವಾಸಿ ಯತೀಶ(28) ಎಂಬಾತ ತನ್ನ ಪರಿಚಯದ ಬಾಲಕಿಯು ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ಬಂದು ಪ್ರೀತಿಸುವುದಾಗಿ ಹೇಳಿ ನಂಬಿಸಿದ್ದಲ್ಲದೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಬಾಲಕಿ ಗರ್ಭವತಿಯಾಗಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಬಾಲಕಿಯ ತಾಯಿ ಮಂಗಳವಾರದಂದು ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿ ಯತೀಶ್ ನನ್ನು ವಶಕ್ಕೆ ಪಡೆದಿರುವ ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ರಾಜ್ಯ ಮಟ್ಟದ ಗಾಂಧೀಜಿ ಪ್ರಬಂಧ ಸ್ಪರ್ಧೆ

error: Content is protected !!
Scroll to Top