ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಜುಬೈಲ್, ಸೆ.04. ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಮೂಲದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ.

ಮೃತರನ್ನು ಮಂಗಳೂರಿನ ಕೃಷ್ಣಾಪುರ ನಿವಾಸಿ ಝಾಕಿರ್ ಎಂದು ಗುರುತಿಸಲಾಗಿದೆ. ಕಳೆದ 15 ವರ್ಷಗಳಿಂದ ಸೌದಿಯಲ್ಲಿ ನೆಲೆಸಿದ್ದ ಝಾಕಿರ್ ಕಳೆದ ತಿಂಗಳಷ್ಟೇ ಊರಿಗೆ ಬಂದಿದ್ದು, ನಂತರ ಸೌದಿಗೆ ಹಿಂದಿರುಗಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗು ಓರ್ವ ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Scroll to Top