ಪ್ರಸಕ್ತ ವರ್ಷದಲ್ಲಿ ಮೊದಲ ಸಲ ಮುಳುಗಡೆಯಾದ ಹೊಸ್ಮಠ ಸೇತುವೆ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಜು.20. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುಳುಗೆ ಸೇತುವೆಯೆಂದೇ ಖ್ಯಾತಿ ಪಡೆದಿರುವ ಹೊಸ್ಮಠ ಸೇತುವೆಯು ಪ್ರಸಕ್ತ ವರ್ಷದಲ್ಲಿ ಮೊದಲ ಬಾರಿಗೆ ಮುಳುಗಡೆಯಾಗಿದೆ.

ನೂತನ ಸೇತುವೆಯ ಕಾಮಗಾರಿ ನಡೆಯುತ್ತಿದ್ದರೂ, ಪೂರ್ತಿಯಾಗದ ಕಾರಣ ಹಳೇ ಸೇತುವೆಯನ್ನು ಕಾಯುವ ಪರಿಸ್ಥಿತಿ ಪ್ರಯಾಣಿಕರದ್ದಾಗಿದೆ.
ಸೇತುವೆ ಮುಳುಗಡೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನ ಸವಾರರು ಇಚಿಲಂಪಾಡಿ ಮೂಲಕ ಸುತ್ತು ಬಳಸಿ ಪ್ರಯಾಣಿಸಬೇಕಿದೆ‌. ಕಡಬ ಪೊಲೀಸರು ಸ್ಥಳದಲ್ಲಿದ್ದು, ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದಾರೆ.

Scroll to Top