ಇನ್ಮುಂದೆ ಆಧಾರ್ ತಿದ್ದುಪಡಿಗಾಗಿ ಅಲೆದಾಟಕ್ಕೆ ಬ್ರೇಕ್ ► ಇಂದಿನಿಂದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಆಧಾರ್ ತಿದ್ದುಪಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05. ಆಧಾರ್ ನೋಂದಣಿಗಾಗಿ ಸಾರ್ವಜನಿಕರು ಜಿಲ್ಲೆಯ ವಿವಿಧ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದು, ಇನ್ನೂ ನೋಂದಣಿಯಾಗದೆ ಇರುವ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಸೆಪ್ಟಂಬರ್ 5 ರಿಂದ ಆಧಾರ್ ತಿದ್ದುಪಡಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಆಧಾರ್ ತಿದ್ದುಪಡಿ ಮಾಡಲೂ ಅವಕಾಶ ಕಲ್ಪಿಸಲಾಗಿದ್ದು, ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರ ಕಚೇರಿಯ ಪ್ರಕಟಣೆ ತಿಳಿಸಿದೆ.

Scroll to Top