(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಾೈಮಣ ಗ್ರಾಮದ ಕಾೈಮಣ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಮೇಲ್ವಿಚಾರಕಿ ಸುಜಾತಾ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸಹಾಯಕಿ ನೀಲಮ್ಮ ಪೌಷ್ಠಿಕಾ ಆಹಾರದ ಕುರಿತಾಗಿ, ಬೆಳಂದೂರು ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಸೀತಾರಾಮ ಸುಕನ್ಯಾ ಸಮೃದ್ಧಿ ಯೋಜನೆ ಕುರಿತಾಗಿ ಮಾಹಿತಿ ನೀಡಿದರು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಜಾತಾ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಮಕ್ಕಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ಅಂಕಜಾಲು ಕಾರ್ಯಕ್ರಮ ನಿರ್ವಹಿಸಿದರು. ಚಂದ್ರಾವತಿ ವಂದಿಸಿದರು.
Also Read ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಸಿಬಿಎಸ್ ಇ ಬೋರ್ಡ್ ನವದೆಹಲಿಯಿಂದ 10ನೇ ತರಗತಿಯ ವರೆಗೆ ಮಾನ್ಯತೆ