ಅಡಿಕೆ ಮರಕ್ಕೆ ಕೊಳೆರೋಗ ಬಾಧಿಸಿದೆಯೇ..? ► ರೋಗ ನಿಯಂತ್ರಣಕ್ಕೆ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದೆಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಈ ವರ್ಷ ಮಳೆ ಬೇಗನೆ ಆರಂಭವಾಗಿದ್ದಲ್ಲದೇ ಬಿರುಸಿನ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆರೋಗ ಕಂಡುಬಂದಿದೆ. ನಿರಂತರ ಸುರಿದ ಮಳೆಯಿಂದ ರೈತರಿಗೆ ಸಕಾಲದಲ್ಲಿ ಔಷಧ ಸಿಂಪರಣೆ ಮಾಡಲಾಗದೇ ಕೊಳೆ ರೋಗ ಉಲ್ಭಣಿಸಿ ಹಾನಿ ಅನುಭವಿಸುವಂತಾಗಿದೆ.

ಮಳೆ ಕಡಿಮೆಯಾಗುತ್ತಿದ್ದರೂ ಕೊಳೆ ರೋಗದ ಹಾನಿ ಇಲ್ಲಿಗೆ ಮುಗಿದಿಲ್ಲ. ಹೀಗೆ ಉದುರಿದ ಕಾಯಿಗಳನ್ನು ಮತ್ತು ಸತ್ತ ಅಡಿಕೆ ಸಿಂಗಾರಗಳನ್ನು ತೋಟದಿಂದ ಹೊರ ಹಾಕಬೇಕು. ಅಡಿಕೆ ಗೊನೆಗಳಿಗೆ ಬೋರ್ಡೋದ್ರಾವಣ ಸಿಂಪಡಣೆಯಾಗಿ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿಯಾಗಿದ್ದಲ್ಲಿ, ಅವಶ್ಯಕತೆಯಿದ್ದಲ್ಲಿ ಮತ್ತೊಮ್ಮೆ ಶೇ. 1ರ ಬೋರ್ಡೋದ್ರಾವಣ ಸಿಂಪಡಿಸಬೇಕು. ಅಡಿಕೆಯಲ್ಲಿ ಬೇರು ಹುಳ ನಿಯಂತ್ರಣಕ್ಕೆ 20 ಗ್ರಾಂ. ಫೋರೇಟ್ ಪ್ರತೀ ಗಿಡಕ್ಕೆ ಅಥವಾ 5 ಮಿ.ಲೀ. ಕ್ಲೋರೋಪೈರಿಫಾಸ್ ಪ್ರತೀ ಲೀಟರ್ ನೀರಿಗೆ ಬೆರೆಸಿ 2-3 ಲೀಟರ್ ದ್ರಾವಣವನ್ನು ಮರದ ಬುಡಕ್ಕೆ ಹಾಕಬೇಕು.

Also Read  ಮಂಗಳೂರು: ಬಿಜೆಪಿ ಸಕ್ರಿಯ ಕಾರ್ಯಕರ್ತ, ವಕ್ಫ್ ಬೋರ್ಡ್ ಸದಸ್ಯನಿಗೆ ಜೀವಬೆದರಿಕೆ

ಕೋಕೋ ಗಿಡಗಳಲ್ಲಿ ಕೊಳೆ ರೋಗ ಪೀಡಿತ ಕಾಯಿಗಳನ್ನು ತೆಗೆಯುವುದು ಮತ್ತು ಅವಶ್ಯಕತೆಗನುಗುಣವಾಗಿ ಪ್ರೂನಿಂಗ್ ಮಾಡಿ ಶೇ. 1 ಬೋರ್ಡೋದ್ರಾವಣ ಅಥವಾ 3 ಗ್ರಾಂ. ತಾಮ್ರದ ಆಕ್ಸಿಕ್ಲೋರೈಡ್ ಪ್ರತೀ ಲೀಟರ್ ನೀರಿಗೆ ಬೆರೆಸಿ ಈ ಮಿಶ್ರಣವನ್ನು ಆರೋಗ್ಯವಂತ ಕಾಯಿಗಳ ಮೇಲೆ ಸಿಂಪಡಿಸಬೇಕು. ಕಾಳುಮೆಣಸಿನ ಬಳ್ಳಿಯಲ್ಲಿ ಸೊರಗು ರೋಗ ಪ್ರಾರಂಭವಾಗಿದ್ದಲ್ಲಿ ನಿಯಂತ್ರಣಕ್ಕೆ ಶೇ. 1 ರ ಬೋರ್ಡೋದ್ರಾವಣ ಬಳ್ಳಿಗಳ ಎಲ್ಲಾ ಎಲೆಗಳಿಗೆ ಬೀಳುವಂತೆ ಸೂಕ್ಷ್ಮವಾಗಿ ಸಿಂಪಡಿಸಬೇಕು ಹಾಗೂ ಅದೇ ದ್ರಾವಣವನ್ನು ಬಳ್ಳಿಗಳ ಬುಡಕ್ಕೂ ಹಾಕಬೇಕು. ಈ ಸಿಂಪರಣೆಯನ್ನು 30-40 ದಿನಗಳ ಅಂತರದಲ್ಲಿ ಪುನರಾವರ್ತಿಸಬೇಕು. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ದೂರವಾಣಿ ಸಂಖ್ಯೆ: 0824 – 2985298 ಗೆ ಸಂಪರ್ಕಿಸಬಹುದು.

Also Read  ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಏಕನಾಥ್ ಶಿಂಧೆ

error: Content is protected !!
Scroll to Top