ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್‍ಟಾಪ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.20. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಓದುತ್ತಿರುವ 1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ.

 ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ, ವಾರ್ಷಿಕ 2.5 ಲಕ್ಷ ರೂ. ಆದಾಯ ಮಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 300 ಕೋಟಿ ರು ವೆಚ್ಚ ತಗುಲಲಿದೆ ಎಂದಿದ್ದಾರೆ. ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಡಿಪ್ಲೊಮಾದಲ್ಲಿ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಈ ಉಚಿತ ಲ್ಯಾಪ್‌ಟಾಪ್‌ ಭಾಗ್ಯ ಸಿಗಲಿದೆ. ಆದರೆ ಸರ್ಕಾರಿ ಕೋಟಾದಡಿ ಖಾಸಗಿ ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ದೊರೆಯುವುದಿಲ್ಲ ಎಂದಿದ್ದಾರೆ.

error: Content is protected !!
Scroll to Top