ಕಿನ್ನಿಗೋಳಿ: ಆ್ಯಕ್ಟಿವಾ – ಟಿಪ್ಪರ್ ಢಿಕ್ಕಿ ► ಕಾಲೇಜು ವಿದ್ಯಾರ್ಥಿ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಆ್ಯಕ್ಟಿವಾ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ಶುಕ್ರವಾರದಂದು ನಡೆದಿದೆ.

ಮೃತ ಯುವಕನನ್ನು ಕಿನ್ನಿಗೋಳಿ ಪೊಂಪೈ ಕಾಲೇಜಿನ ಅಂತಿಮ ವರ್ಷದ ಬಿಬಿಎಮ್ ವಿದ್ಯಾರ್ಥಿ, ಕಾರ್ನಾಡು ನಿವಾಸಿ ವರ್ಶಿತ್(21) ಎಂದು ಗುರುತಿಸಲಾಗಿದೆ. ದ್ವಿತೀಯ ಬಿಬಿಎಮ್ ವಿದ್ಯಾರ್ಥಿ ಡೆರಿಕ್ ವಾಸ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಜೊತೆಯಾಗಿ ಶುಕ್ರವಾರ ಮಧ್ಯಾಹ್ನ ಊಟಕ್ಕೆಂದು ಹೊರಟ ಸಂದರ್ಭದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ದಾಂಪತ್ಯ ಜೀವನ ಹಾಳಾಗಿ ಹೋಗೋಕೆ ಇದುವೇ ಕಾರಣ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಗುರುಗಳಿಗೆ ಕರೆಮಾಡಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

error: Content is protected !!
Scroll to Top