ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ► ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು

(ನ್ಯೂಸ್ ಕಡಬ) newskadaba.com ಉಡುಪಿ, ಸೆ.08. ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಮಾರುತಿ 800 ಕಾರೊಂದು ಹಠಾತ್ತನೆ ಉಂಟಾದ ಬೆಂಕಿಯಿಂದಾಗಿ ಸುಟ್ಟು ಭಸ್ಮವಾದ ಘಟನೆ ಉಡುಪಿಯ ಜೋಡುಕಟ್ಟೆ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಮಹಿಳೆಯೋರ್ವರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕಾರಿನ ಬಾನೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾಯವನ್ನರಿತು ತಕ್ಷಣವೇ ಕಾರನ್ನು ನಿಲ್ಲಿಸಿ ಹೊರಬಂದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಕ್ಷಣಮಾತ್ರದಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದ್ದು, ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

Scroll to Top