ನಾಳೆ ಭಾರತ ಬಂದ್ ಹಿನ್ನೆಲೆ ► ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ಕಾಂಗ್ರೆಸ್ ಪಕ್ಷವು ಸೆಪ್ಟೆಂಬರ್ 10 ರಂದು ಭಾರತ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ, ಪದವಿ ಕಾಲೇಜುಗಳಿಗೆ ಸೋಮವಾರದಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: 35ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ

error: Content is protected !!
Scroll to Top