ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ನಾಳೆ ಭಾರತ ಬಂದ್ ಹಿನ್ನೆಲೆ ► ಕಡಬದಲ್ಲೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಬ್ಲಾಕ್ ಕಾಂಗ್ರೆಸ್ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೆಪ್ಟೆಂಬರ್ 10 ಸೋಮವಾರದಂದು ಭಾರತ ಬಂದ್ ಗೆ ಕಾಂಗ್ರೆಸ್ ಕರೆ‌ ನೀಡಿದ್ದು, ಕಡಬದಲ್ಲೂ ಬಂದ್ ಇರಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಹೇಳಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಜನಸಾಮಾನ್ಯರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಭಾರತ ಬಂದ್ ಗೆ ಕರೆ ನೀಡಿದ್ದರಿಂದ ಕಡಬದಲ್ಲಿನ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವುದರ ಮೂಲಕ ಭಾರತ ಬಂದ್ ಗೆ ಬೆಂಬಲ ನೀಡಬೇಕೆಂದು‌ ಮನವಿ ಮಾಡಿದ್ದಾರೆ.

Also Read  ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

error: Content is protected !!
Scroll to Top