ಆತೂರು: ಟಯರ್‌ ಉರಿಸಿ ರಸ್ತೆ ತಡೆ ಮಾಡುವ ವಿಚಾರ ► ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಸಂದರ್ಭದಲ್ಲಿ ಟಯರ್ ಸುಡುವ ಮೂಲಕ ರಸ್ತೆ ತಡೆಯುವ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದ ಘಟನೆ ಆತೂರಿನಲ್ಲಿ ನಡೆದಿದೆ.

ಆತೂರಿನಲ್ಲಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಕೆಲ ಯುವಕರು ಟಯರ್ ಗೆ ಬೆಂಕಿ ಹಚ್ಚಲು ಮುಂದಾಗುತ್ತಿದ್ದಂತೆ ಪೊಲೀಸರು ಆಗಮಿಸಿದ್ದು, ಪೊಲೀಸರು ಹಾಗೂ ಯುವಕರ ಮಧ್ಯೆ ವಾಗ್ವಾದ ಉಂಟಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹೆಚ್ಚುವರಿ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Also Read  ಕಡಬ : ಸರಸ್ವತೀ ವಿದ್ಯಾಲಯ 70ನೇ ಗಣರಾಜ್ಯೋತ್ಸವ ಆಚರಣೆ

error: Content is protected !!
Scroll to Top