ಭಾರತ್ ಬಂದ್ ಹಿನ್ನೆಲೆ ► ಬಂಟ್ವಾಳ ಶಾಸಕರ ಕಾರಿಗೆ ಕಲ್ಲೆಸೆತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.10. ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೋಳಂಗಡಿಯಲ್ಲಿ ನಡೆದಿದೆ.

ಬಂಟ್ವಾಳದಿಂದ ಕಲ್ಲಡ್ಕಕ್ಕೆ ತನ್ನ ಟೊಯೋಟಾ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದ ಶಾಸಕರ ಕಾರಿಗೆ ಬೋಳಂಗಡಿ ತಲುಪುತ್ತಿದ್ದಂತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆನ್ನಲಾಗಿದೆ. ಇದರಿಂದಾಗಿ ಕಾರಿನ ಎಡಭಾಗಕ್ಕೆ ಸ್ವಲ್ಪ ಹಾನಿಯಾಗಿದೆ. ಕಲ್ಲೆಸೆತದ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಜಮಾಯಿಸತೊಡಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.

Also Read  ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ

error: Content is protected !!
Scroll to Top