ಮಂಗಳೂರು: ರಸ್ತೆಗುರುಳಿದ ಖಾಸಗಿ ಬಸ್ ► ಮೂವತ್ತಕ್ಕೂ ಅಧಿಕ ಮಂದಿಗೆ ಗಾಯ



(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.11. ಖಾಸಗಿ ಬಸ್ಸೊಂದು ರಸ್ತೆಗುರುಳಿದ ಪರಿಣಾಮ ವಿದ್ಯಾರ್ಥಿಗಳ ಸಹಿತ ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿ ನಡೆದಿದೆ.







ಕಾಟಿಪಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿ ಬಿದ್ದಿದೆ. ಬಸ್ ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಉತ್ತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top