ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.

ಮದ್ಯಾಹ್ನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ  ವಹಿಸುವರು.ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡುವರು.

ನಂತರ ಮಂಜುನಾಥನಗರ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Also Read  ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ

ಸಂಜೆ ಮಹಾಪೂಜೆ, ಪ್ರಸಾದ ವಿತರಣೆಯ ಬಳಿಕ ಬಂಬಿಲ ಗೌರಿಹೊಳೆಯಲ್ಲಿ ವಿಗ್ರಹದ ಜಲಸ್ತಂಬನ ನಡೆಯಲಿದೆ.

 

 

 

 

error: Content is protected !!
Scroll to Top