ಕಡಬ: ನಾಪತ್ತೆಯಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಕಳೆದ ಮಾರ್ಚ್ ತಿಂಗಳಲ್ಲಿ ನಾಪತ್ತೆಯಾಗಿದ್ದ ಯುವತಿಯನ್ನು ಆಕೆಯ ಪ್ರಿಯಕರನೊಂದಿಗೆ ಕಡಬ ಪೊಲೀಸರು ಪತ್ತೆ ಹಚ್ಚಿದ್ದಾರೆ.

2018 ಮಾರ್ಚ್ ತಿಂಗಳಿನಲ್ಲಿ ಠಾಣಾ ವ್ಯಾಪ್ತಿಯ ಕುಂತೂರು ಗ್ರಾಮದ ಗುತ್ತುಪಾಲ್ ನಿವಾಸಿ ನಂದಿನಿ(22) ನಾಪತ್ತೆಯಾಗಿದ್ದರು. ಅದೇ ಸಮಯದಲ್ಲಿ ಆಕೆಯ ಸಂಬಂಧಿಕ ಅದೇ ಊರಿನ ನಾಗೇಶ ಎಂಬಾತನೂ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗಿದ್ದು, ಇವರನ್ನು ಕಡಬ ಠಾಣಾ ಪೊಲೀಸ್ ಸಿಬ್ಬಂದಿಗಳಾದ ಪ್ರಕಾಶ್ ಹಾಗೂ ಚಂದ್ರಿಕಾ ಉಡುಪಿ ಜಿಲ್ಲೆಯ ಬೈಂದೂರು ಸಮೀಪದ ಉಪ್ಪುಂದದಲ್ಲಿ ಬುಧವಾರದಂದು ಪತ್ತೆ ಹಚ್ಚಿ ಕಡಬಕ್ಕೆ ಕರೆದುಕೊಂಡು ಬಂದಿದ್ದಾರೆ. ಈ ಮೂಲಕ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ.

Also Read  ದೇವರ ದರ್ಶನಕ್ಕೆ ಮಾತ್ರ ಅವಕಾಶ: ಸಚಿವ ಕೋಟ

error: Content is protected !!
Scroll to Top