ಸೆ.16: ಕಡಬ ವಲಯ ಒಕ್ಕಲಿಗ ಗೌಡ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ► ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಗೌಡ ಸಮಾಜದ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮವು ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸೆ. 16 ರಂದು ಜರಗಲಿದೆ ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲು ತಿಳಿಸಿದ್ದಾರೆ.

ಅವರು ಬುಧವಾರದಂದು ಕಡಬದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಪೂರ್ವಾಹ್ನ ಗಂಟೆ 10.30ಕ್ಕೆ ಸಭಾ ಕಾರ್ಯಕ್ರಮವು ಆರಂಭಗೊಳ್ಳಲಿದ್ದು, ಆದಿ ಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಅವರನ್ನು ಸಮ್ಮಾನಿಸಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಸುಳ್ಯ ಎಪಿಎಂಸಿ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ, ಹಾವೇರಿ ಅಬಕಾರಿ ಇಲಾಖಾ ಉಪ ಆಯುಕ್ತ ಗೋಪಾಲಕೃಷ್ಣ ಗೌಡ ಪುಯಿಲ ಅವರು ಆಗಮಿಸಲಿದ್ದಾರೆ. ರಾಜ್ಯಮಟ್ಟದ ಛಾಯಗ್ರಾಹಕ ಪ್ರಶಸ್ತಿ ಪುರಸ್ಕೃತ ಶಿವರಾಮ ಗೌಡ ಎಂ.ಎಸ್., ಅಂತರಾಷ್ಟ್ರೀಯ ಕರಾಟೆ ಪಟು ದೀಪಕ್ ಗೌಡ ಪನ್ಯಾಡಿ, ಪ್ರೋ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿರುವ ಮಿಥಿನ್ ಗೌಡ, ವೈದ್ಯಕೀಯ ಪದವೀಧರ ಡಾ|ಅವಿನ್ ಗೌಡ ಡಿ.ಪಿ. ಹಾಗೂ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪ್ರಶಸ್ತಿ ವಿಜೇತ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಗೌಡ ಅಮೈ ಅವರನ್ನು ಗೌರವಿಸಲಾಗುವುದು ಎಂದರು.

Also Read  ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಡಿ.04 ರಂದು ಕಡಬ ತಾಲೂಕು ಕಛೇರಿಯ ಮುಂಭಾಗ ಬೃಹತ್ ಪ್ರತಿಭಟನೆ

ಕಾರ್ಯಕ್ರಮದ ಸಂಚಾಲಕ ವಾಡ್ಯಪ್ಪ ಗೌಡ ಎರ್ಮಾಯಿಲ್ ಅವರು ಮಾತನಾಡಿ ಕಾರ್ಯಕ್ರಮದ ಸಿದ್ಧತೆಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಭಾ ಕಾರ್ಯಕ್ರಮಕ್ಕೆ ಮೊದಲು ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಡಬದ ಪಂಜ ಕ್ರಾಸ್ ಬಳಿ ಪೂರ್ಣಕುಂಭ ಸ್ವಾಗತದ ಮೂಲಕ ಎದುರ್ಗೊಂಡು ಅಲ್ಲಿಂದ ಆಕರ್ಷಕ ರಥದಲ್ಲಿ ಕುಳ್ಳಿರಿಸಿ ಮೆರವಣಿಗೆಯಲ್ಲಿ ಸಭಾವನಕ್ಕೆ ಕರೆತರಲಾಗುವುದು ಎಂದು ಹೇಳಿದರು. ನಿಯೋಜಿತ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಮಾತನಾಡಿ ಈಗಾಗಲೇ ವಲಯದ 13 ಗ್ರಾಮಗಳ ಸಮಿತಿಗಳನ್ನು ಪುನರ್ ರಚಿಸಲಾಗಿದ್ದು, ಸಭಾಭವನವನ್ನು ಸುಸಜ್ಜಿತವಾಗಿ ರೂಪುಗೊಳಿಸುವುದರೊಂದಿಗೆ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಗಣೇಶ್ ಗೌಡ ಕೈಕುರೆ, ನಿಯೋಜಿತ ಅಧ್ಯಕ್ಷ ಮಂಜುನಾಥ ಗೌಡ ಕೋಲಂತ್ತಾಡಿ, ಮಹಿಳಾ ಘಟಕದ ಅಧ್ಯಕ್ಷೆ ನೀಲಾವತಿ ಶಿವರಾಂ, ಪ್ರಮುಖರಾದ ಸಾಂತಪ್ಪ ಗೌಡ ಪಿಜಕಳ, ಸೀತಾರಾಮ ಗೌಡ ಪೆÇಸವಳಿಕೆ, ಶಿವರಾಮ ಗೌಡ ಎಂ.ಎಸ್., ರುಕ್ಮಿಣಿ ಸಾಂತಪ್ಪ ಗೌಡ ಮುಂತಾದವರು ಉಪಸ್ಥಿತರಿದ್ದರು.

Also Read  ಕುಂಟುತ್ತಾ ಸಾಗುತ್ತಿರುವ ಗೋಳಿತ್ತಡಿ - ನೆಲ್ಯೊಟ್ಟು ರಸ್ತೆಯ ಮರು ಡಾಮರೀಕರಣ ಕಾಮಗಾರಿ ► ಹರಡಿಕೊಂಡಿರುವ ಜಲ್ಲಿಕಲ್ಲುಗಳನ್ನು ತಪ್ಪಿಸಲು ಹೋಗಿ ಚರಂಡಿಗಿಳಿದ ಕಾರು

error: Content is protected !!
Scroll to Top