ಸುಳ್ಯ – ಮಡಿಕೇರಿ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ನಿಷೇಧ ► ಮೂರು ದಿನಗಳ ಹಿಂದಷ್ಟೇ ಸಂಚಾರಕ್ಕೆ ಅವಕಾಶ ನೀಡಲಾಗಿದ್ದ ಸಂಪಾಜೆ ಘಾಟ್ ರಸ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.15. ಪ್ರಾಕೃತಿಕ ವಿಕೋಪದಿಂದಾಗಿ ಕುಸಿದಿದ್ದರಿಂದಾಗಿ ಬಂದಾಗಿದ್ದ ಸಂಪಾಜೆ ಘಾಟ್ ರಸ್ತೆಯಲ್ಲಿ ಕಳೆದ ಮೂರು ದಿನಗಳ ಹಿಂದೆಯಷ್ಟೇ ಲಘು ವಾಹನ ಸಂಚಾರಕ್ಕೆ ಅವಕಾಶ ಮಾಡಿ‌ ಕೊಟ್ಟಿದ್ದರಾದರೂ, ಶನಿವಾರದಿಂದ ಮತ್ತೆ ಸಂಚಾರ ನಿಷೇಧಿಸಲಾಗಿದೆ.

ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನಡುವೆ ರಸ್ತೆ ದುರಸ್ತಿ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ ಮುಂದಿನ ಆದೇಶದವರೆಗೆ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿ ಕೊಡಗು ಜಿಲ್ಲಾಧಿಕಾರಿ ಅದೇಶಿಸಿದ್ದಾರೆ. ರಸ್ತೆ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಪೂರ್ಣಗೊಂಡ ಬಳಿಕ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲಿಸಲಿದ್ದಾರೆ. ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ತಿಳಿಸಿದ್ದಾರೆ.

Also Read  ಇಸ್ಪೀಟ್ ಅಡ್ಡೆಗೆ ದಾಳಿ ➤ 8 ಮಂದಿಯ ಬಂಧನ

error: Content is protected !!
Scroll to Top