ಮಂಗಳೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಗೆ ದಾಳಿ ► ಓರ್ವ ದಳ್ಳಾಳಿಯ ಬಂಧನ, ಮೂವರು ಯುವತಿಯರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17. ಲಾಡ್ಜ್ ವೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿ(ಪಿಂಪ್) ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ನೊಂದ ಯುವತಿಯರನ್ನು ರಕ್ಷಿಸಿದ ಘಟನೆ ಭಾನುವಾರದಂದು ನಡೆದಿದೆ.

ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಕಂಫರ್ಟ್ ಲಾಡ್ಜ್ ನಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ವೇಶ್ಯಾವಾಟಿಕೆಗೆ ಯುವತಿಯರನ್ನು ಒದಗಿಸುತ್ತಿದ್ದ ದಲ್ಲಾಳಿ (ಪಿಂಪ್) ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಲ ನಿವಾಸಿ ದೀಪಕ್(43) ಎಂಬಾತನನ್ನು ಬಂಧಿಸಿದ್ದಾರೆ. ವೇಶ್ಯಾವಾಟಿಕೆಗೆ ಯುವತಿಯರನ್ನು ಒದಗಿಸುತ್ತಿದ್ದ ಇನ್ನೂ ಮೂವರು ದಲ್ಲಾಳಿಗಳಾದ ನಸೀರ್ ಉಪ್ಪಿನಂಗಡಿ, ನಸೀರ್‌‌ ಆಡ್ಯಾರ್ ಪದವು‌ ಮತ್ತು ಜೀವನ್ ಪೂಜಾರಿ ಎಂಬವರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ಸಿಟಿ ಕಂಪರ್ಟ್ ಲಾಡ್ಜ್ ನಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದರು. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಮೂವರು ನೊಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Also Read  ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್, ಹಾಗೂ ಸಿಬ್ಬಂದಿಗಳು ಮತ್ತು ಮಂಗಳೂರು ಉತ್ತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಸುರೇಶ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

error: Content is protected !!
Scroll to Top