ಸಾಂದರ್ಭಿಕ ಚಿತ್ರ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯ ಯೋಜನೆಯ ಅನುಷ್ಠಾನಕ್ಕಾಗಿ ಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಮತ್ತು ಸಾಮಾನ್ಯ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 01 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.mangalorecity.mrc.gov.in ನಲ್ಲಿ ಪಡೆಯಬಹುದು. ಸೂಕ್ತ ಅರ್ಜಿ ನಮೂನೆಯೊಂದಿಗೆ ಸಂಬಂಧಿಸಿರುವ ದಾಖಲೆಗಳನ್ನು ಲಗತ್ತಿಸಿ, ಆಸಕ್ತರು smartcitymangaluru@gmail.com ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರ ಪ್ರಕಟಣೆ ತಿಳಿಸಿದೆ.
