ಮಂಗಳೂರು: ಹಾಡುಹಗಲೇ ಕುಡಿದು ತೂರಾಡಿದ ಟ್ರಾಫಿಕ್ ಪೊಲೀಸ್ ► ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೋರ್ವ ಕರ್ತವ್ಯದಲ್ಲಿದ್ದಾಗಲೇ ಕಂಠಪೂರ್ತಿ ಕುಡಿದು ಮುಖ್ಯ ರಸ್ತೆಯಲ್ಲಿ ತೂರಾಡಿದ ಘಟನೆ ಬುಧವಾರ ಹಾಡುಹಗಳು ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯ ಪೊಲೀಸ್ ಸಿಬ್ಬಂದಿ ಅಶೋಕ್ ಗೌಡ ಎಂಬಾತ ಬುಧವಾರ ಹಾಡುಹಗಲು ಕರ್ತವ್ಯದಲ್ಲಿದ್ದ ವೇಳೆ ಪೂರ್ತಿ ನಶೆಯೇರಿಸಿ ನಡೆಯಲು ಸಾಧ್ಯವಾಗದೆ ತೂರಾಡುತ್ತಾ ಬರುತ್ತಿದ್ದುದನ್ನು ಸಾರ್ವಜನಿಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಲಾಲ್ ಬಾಗ್ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಎದ್ದು ನಿಲ್ಲಲೂ ಸಾಧ್ಯವಿಲ್ಲದ ಈತ ತನ್ನ ದ್ವಿಚಕ್ರ ವಾಹನದಲ್ಲಿ ತೆರಳಲು ಅನುವಾಗಿದ್ದು, ಆ ಸಂದರ್ಭದಲ್ಲಿ ಸಾರ್ವಜನಿಕರು ಈತನನ್ನು ತಡೆದು ನಿಲ್ಲಿಸಿದ್ದಾರೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Also Read  ಎಲ್ಲೆಂದರಲ್ಲಿ ಬಿಸಾಡುತ್ತಿರುವ ತ್ಯಾಜ್ಯ , ದುರ್ವಾಸನೆಯಿಂದ ರೋಗಕ್ಕೆ ಆಹ್ವಾನ

error: Content is protected !!
Scroll to Top