ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ

ಕಾಣಿಯೂರು : ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ೩೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತೀವರ್ಷದಂತೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.

೨೦೧೭-೧೮ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿನ ವಿದ್ಯಾರ್ಥಿ ಚರಣ್ ಕುಮಾರ್ ಎಂ. ಹಾಗೂ ದ್ವಿತೀಯ ಸ್ಥಾನ ಪಡೆದ ಹರ್ಷಿತಾ ಕೆ.ಎಸ್. ಮತ್ತು ೭ ನೇ ತರಗತಿಯ ಅತ್ಯಽಕ ಅಂಕ ಗಳಿಸಿದ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿನ ವಿದ್ಯಾರ್ಥಿಗಳಾದ ಮಧುಶ್ರೀ ಎ. ಜ್ಞಾನಶ್ರೀ ಎಂ.ಆರ್. ಇವರಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ, ನಗದು ಹಾಗೂ ಪುಸ್ತಕವನ್ನು ನೀಡಿ ಟಿ. ನಾರಾಯಣ ಭಟ್ ರಾಮಕುಂಜ ಸಮ್ಮಾನಿಸಿದರು. ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಕಾರ್ಯದರ್ಶಿ ಜಯಂತ ಅಬೀರ, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ದಿನೇಶ್ ಮುಗರಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Also Read  ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ

 

 

 

 

 

error: Content is protected !!
Scroll to Top