ವಿಟ್ಲ: ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ► ಕಾಸರಗೋಡು ಹಿಂದೂ ಐಕ್ಯವೇದಿ ಕಾರ್ಯದರ್ಶಿ ಮಂಜುನಾಥ ಉಡುಪ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ.23. ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕೇರಳದ ಕಾಸರಗೋಡು ಜಿಲ್ಲಾ ಹಿಂದೂ ಐಕ್ಯವೇದಿಯ ಕಾರ್ಯದರ್ಶಿ ಮಂಜುನಾಥ ಉಡುಪ ಎಂಬವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ.

ಆರೋಪಿಯು ಸೆಪ್ಟೆಂಬರ್ 09 ರಂದು ಬಂಟ್ವಾಳ ತಾಲ್ಲೂಕು ವಿಟ್ಲ ಠಾಣಾ ವ್ಯಾಪ್ತಿಯ ಕಡಂಬು ಗ್ರಾಮದಲ್ಲಿನ ಖಾಸಗಿ ಜಾಗದಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡುವಾಗ ಅನ್ಯಧರ್ಮದವರನ್ನು ಹೀಯಾಳಿಸಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಲ್ಲದೆ ಕಾರ್ಯಕ್ರಮಕ್ಕೆ ಅನುಮತಿ ಪಡೆಯದೆ ಧ್ವನಿವರ್ಧಕವನ್ನು ಉಪಯೋಗಿಸಿದ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಸಂಘಟಕರು ಮತ್ತು ವೇದಿಕೆಯ ಮೇಲೆ ಹಾಜರಿದ್ದ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದ ತಲೆಮರೆಸಿಕೊಂಡಿದ್ದ ಈತ ಬಂಟ್ವಾಳ ನ್ಯಾಯಾಲಯದಿಂದ ಜಾಮೀನು ಪಡೆದು ಠಾಣೆಗೆ ಹಾಜರಾದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಮತೀಯ ಗೂಂಡಾಶೀಟ್ ತೆರೆಯಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

Also Read  RBI ಪ್ರಧಾನ ಕಛೇರಿಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ

error: Content is protected !!
Scroll to Top