ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ ► ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು



(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಸೆ.24. ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಆರೋಪಿ ಮೂಡುಬಿದಿರೆ ನಿವಾಸಿ ಇಮ್ತಿಯಾಝ್(32) ಎಂಬಾತನ ಮೇಲೆ ತಂಡವೊಂದು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ.







ಮೂಡುಬಿದಿರೆಯ ಗಂಟಾಲ್‌ಕಟ್ಟೆ ಮಸೀದಿಯ ಕಟ್ಟಡವೊಂದರಲ್ಲಿ ಸಣ್ಣ ಹೋಟೆಲ್ ನಡೆಸುತ್ತಿದ್ದ ಇಮ್ತಿಯಾಝ್ ಎಂದಿನಂತೆ ಇಂದು ಬೆಳಗ್ಗೆ ಹೊಟೇಲ್‌ನಲ್ಲಿದ್ದ ವೇಳೆ ಆಗಮಿಸುತ್ತಾರೆ ತಂಡ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಘಟನೆಯಲ್ಲಿ ಇಮ್ತಿಯಾಝ್‌ರ ತಲೆ, ಕೈ ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top