ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.25. ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರದಂದು ನರಿಮೊಗರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾಕೆಯನ್ಮು ಮೂಲತಃ ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ತಣ್ಣೀರುಹಳ್ಳಿ ನಿವಾಸಿ ಅಣ್ಣಪ್ಪ ಎಂಬವರ ಪುತ್ರಿ ಪುತ್ತೂರು ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜೀವಿತಾ(17) ಎಂದು ಗುರುತಿಸಲಾಗಿದೆ. ನರಿಮೊಗರು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಈಕೆ ಸೋಮವಾರ ಮಧ್ಯಾಹ್ನ ವೇಳೆಗೆ ಕಾಲೇಜಿನಿಂದ ವಸತಿ ನಿಲಯಕ್ಕೆ ಆಗಮಿಸಿ ಹಾಸ್ಟೆಲ್ ಕೊಠಡಿಯ ಫ್ಯಾನಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಭೇಟಿ ನೀಡಿರುವ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Also Read  86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಪ್ರಕಟ

error: Content is protected !!
Scroll to Top