ಕಡಬ: ಬೈಕ್ ಹಾಗೂ ಸ್ವಿಫ್ಟ್ ಗೆ ಢಿಕ್ಕಿ ಹೊಡೆದ ಮಾರುತಿ 800 ಕಾರು ► ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಸ್ವಿಫ್ಟ್ ಕಾರೊಂದಕ್ಕೆ ಮಾರುತಿ 800 ಕಾರು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಕಡಬ ಮಾಲೇಶ್ವರ ನಿವಾಸಿ ಕ್ರೇನ್ ಆಪರೇಟರ್ ಅನಿಲ್ ರವರ ಕಾಲಿಗೆ ಗಂಭೀರ ಸ್ವರೂಪದಲ್ಲಿ ಗಾಯಗಳಾಗಿದ್ದು, ಕಡಬದ 108 ಆಂಬ್ಯಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅನಿಲ್ ರವರು ತನ್ನ ಬೈಕನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಿಚಯಸ್ಥರ ಜೊತೆ ಮಾತನಾಡುತ್ತಿದ್ದ ವೇಳೆ ಕಡಬದಿಂದ ಬಲ್ಯ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಪತ್ರಕರ್ತ ಸುಖ್ ಪಾಲ್ ಪೊಳಲಿ ಮೇಲೆ ಹಲ್ಲೆ ಖಂಡನೀಯ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹ ➤➤ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಿಎಂ ಗೆ ಮನವಿ

error: Content is protected !!
Scroll to Top