ಸುಳ್ಯ: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.27. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ಸುಳ್ಯದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ, ಕೇರಳ ಮೂಲದ ನೇಹಾ ಎ. ಥಾಮ್ಸನ್ ಎಂದು ಗುರುತಿಸಲಾಗಿದೆ. ಸುಳ್ಯದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ ಈಕೆ ಬುಧವಾರ ಸಂಜೆ ಕಾಲೇಜಿನಿಂದ ಹಿಂತಿರುಗಿದ್ದು, ಆ ಬಳಿಕ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆಯಿಂದ ಪ್ರಚೋದನಕಾರಿ ಭಾಷಣದ ಆರೋಪ ➤ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದಿಂದ ಕಡಬ ಠಾಣೆಯಲ್ಲಿ ದೂರು ದಾಖಲು

error: Content is protected !!