ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು ► ಇಲಿಜ್ವರಕ್ಕೆ ಬಲಿಯಾದರೇ ಹರೀಶ್..??

(ನ್ಯೂಸ್ ಕಡಬ) newskadaba.com ಕಡಬ, ಸೆ.27. ತೀವ್ರ ಜ್ವರದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಬೆಳಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಜತ್ತಪ್ಪ ಗೌಡ ಎಂಬವರ ಪುತ್ರ ಹರೀಶ್(26) ಎಂದು ಗುರುತಿಸಲಾಗಿದೆ. ವಾರದ ಹಿಂದೆ ಜ್ವರದಿಂದಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಗುಣಮುಖನಾಗಿ ಮನೆಗೆ ಆಗಮಿಸಿದ್ದು, ಜ್ವರ ಉಲ್ಬಣಗೊಂಡ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಲಿ ಜ್ವರದಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಬಿಜೆಪಿಯ ಕೋಡಿಂಬಾಳ ಬೂತ್ ಸಮಿತಿಯ ಅಧ್ಯಕ್ಷರಾಗಿದ್ದು, ಭಜರಂಗದಳದ ಸಕ್ರೀಯ ಕಾರ್ಯಕರ್ತರಾಗಿದ್ದರು.

Scroll to Top