ಸುಬ್ರಹ್ಮಣ್ಯ: ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಸಾಂದರ್ಭಿಕ ಚಿತ್ರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.27. ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಭಕ್ತಾದಿ ಮಹಿಳೆಯೋರ್ವರು ಇಲ್ಲಿನ ಸಾರ್ವಜನಿಕ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರದಂದು ನಡೆದಿದೆ.

ಮೂಲತಃ ಚಿಕ್ಕಮಗಳೂರಿನವರಾದ ತುಂಬು ಗರ್ಭಿಣಿ ಆಶಾ ಎಂಬಾಕೆ ಕುಕ್ಕೇ ಸುಬ್ರಹ್ಮಣ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ ಬಸ್‌ ನಿಲ್ದಾಣದಲ್ಲಿ ತಂಗಿದ್ದರು. ಬುಧವಾರ ಬೆಳಗ್ಗೆ ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದು, ಆಕೆ ಅಲ್ಲಿ ಗಂಡು‌ ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಈ ವಿಚಾರ ಸಾರ್ವಜನಿಕರ ಗಮನಕ್ಕೆ ಬಂದಿದ್ದು, ತಾಯಿ ಮತ್ತು ಮಗುವನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿ ಅಲ್ಲಿಂದ ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಲೇಡಿಗೋಶನ್‌ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

Also Read  ಇಂದು ಅತೀ ದೊಡ್ಡ ಸೂರ್ಯಗ್ರಹಣ ► ಇದರ ಎಫೆಕ್ಟ್ ಭಾರತದಲ್ಲಿ ಇದೆಯೇ..???

error: Content is protected !!
Scroll to Top