ಇಲಿ ಜ್ವರದಿಂದಾಗಿ ಬಿಜೆಪಿ ಕೋಡಿಂಬಾಳ ಬೂತ್ ಸಮಿತಿಯ ಅಧ್ಯಕ್ಷ ಮೃತಪಟ್ಟ ಹಿನ್ನೆಲೆ ► ಮರಳು ನೀತಿಯ ವಿರುದ್ಧ ಬಿಜೆಪಿಯಿಂದ ನಡೆಯಬೇಕಿದ್ದ ಪ್ರತಿಭಟನೆ ರದ್ದು

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಇಲಿ ಜ್ವರಕ್ಕೆ ತುತ್ತಾಗಿ ಕೋಡಿಂಬಾಳ ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷ ಹರೀಶ್ ಮಜ್ಜಾರು ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯದ ಮರಳು ನೀತಿಯ ವಿರುದ್ಧ ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಇಂದು ನಡೆಯಲಿದ್ದ ಬೃಹತ್ ಪ್ರತಿಭಟನೆಯನ್ನು ರದ್ದುಗೊಳಿಸಲಾಗಿದ್ದು, ಕಡಬ ತಹಶಿಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯ ಸರಕಾರದ ಮರಳು ನೀತಿಯನ್ನು ವಿರೋಧಿಸಿ ಸೆಪ್ಟೆಂಬರ್ 27 ಗುರುವಾರದಂದು ಕಡಬ ಬಿಜೆಪಿ ಕಛೇರಿಯ ಮುಂಭಾಗದಿಂದ ಮೆರವಣಿಗೆ ಹೊರಟು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು‌. ಆದರೆ ಭಜರಂಗದಳದ ಕಾರ್ಯಕರ್ತ, ಬಿಜೆಪಿ ಕೋಡಿಂಬಾಳ ಬೂತ್ ಸಮಿತಿಯ ಅಧ್ಯಕ್ಷ ಹರೀಶ್ ಮಜ್ಜಾರು ಮೃತಪಟ್ಟ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ತಿಳಿಸಿದ್ದಾರೆ.

Also Read  ಸೋಮವಾರದಂದು ಕಡಬದಲ್ಲಿ ಕಾಂಗ್ರೆಸ್ ತಾಲೂಕು ಮಟ್ಟದ ಕಾರ್ಯಕರ್ತರ ಸಮಾವೇಶ ► ರಾಜ್ಯದ ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತಿ

error: Content is protected !!
Scroll to Top