ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ► ದಸರಾ ರಜೆ ಕಡಿತಕ್ಕೆ ಬಿತ್ತು ಕತ್ತರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿಯ ಮಂಗಳೂರು ದಸರಾ ರಜೆ ಕಡಿತಗೊಳಿಸಿದ್ದ ಸರ್ಕಾರ ತನ್ನ ಆದೇಶವನ್ನು ಹಿಂಪಡೆದಿದ್ದು, ಈ ಬಾರಿ ಎಂದಿನಂತೆ ದಸರಾ ರಜೆ ಇರಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ನೀಡಿದ್ದಕ್ಕಾಗಿ ದಸರಾ ರಜೆಯನ್ನು ಕಡಿತ ಮಾಡಲಾಗಿತ್ತು. ಆದರೆ ಈ ಕುರಿತು ವಿರೋಧ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರವು ರಜೆ ಕಡಿತದ ನಿರ್ಧಾರವನ್ನು ವಾಪಾಸ್ ಪಡೆದಿದ್ದು, ಅಕ್ಟೋಬರ್ 7 ರಿಂದ 21 ರವರೆಗೆ ರಜೆ ಘೋಷಿಸುವ ಕುರಿತಾಗಿ ಜಿಲ್ಲಾಧಿಕಾರಿ, ಸಿಇಒ, ಡಿಡಿಪಿಐ ಜೊತೆ ಚರ್ಚೆ ನಡೆಸಿ ತೀರ್ಮಾನಿಸಲಾಗಿದೆ ಎಂದಿದ್ದಾರೆ. ಈ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ರಜೆ ದೊರೆತಂತಾಗಿದೆ.

Also Read  ಅಪಾಯದಲ್ಲಿ ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿ

error: Content is protected !!
Scroll to Top